ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮಗೆ ನೊಣವಿನಕೆರೆ ಅಜ್ಜಯ್ಯ ಅವರ ಮೇಲೆ ಭಕ್ತಿ, ಗೌರವ ಇದ್ದರೆ ಯಾವುದೇ ಅಕ್ರಮ ಮಾಡಿಲ್ಲ ಎಂದು ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ
ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿಗಳಾಗಿದ್ದು, ಬುಧವಾರ ರಾತ್ರಿ ೮ ಗಂಟೆ ವೇಳೆಗೆ ಅಣೆಕಟ್ಟೆಯಲ್ಲಿ ೧೨೪.೮೦ ಅಡಿ ನೀರು ಸಂಗ್ರಹವಾಗಿತ್ತು. ಅಣೆಕಟ್ಟೆಗೆ ೪೨,೧೪೫ ಕ್ಯುಸೆಕ್ ಒಳಹರಿವಿದ್ದರೆ, ೪೦೯೧೪ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.