• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಹಾನಿ ಪರಿಶೀಲಿಸಿದ ಅಧಿಕಾರಿಗಳು

Aug 01 2024, 01:55 AM IST
ಗೋಕಾಕ: ಪ್ರವಾಹದಿಂದ ಹಾನಿಗೊಳಗಾಗಿರುವ ಲೋಳಸೂರ ಸೇತುವೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ಮತ್ತು ಜಿಲ್ಲಾಧಿಕಾರಿ ಮೊಹಮ್ಮದ್ ಷನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಲೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರಿನ ರಭಸಕ್ಕೆ ಸೇತುವೆ ಮೇಲಿನ ರಸ್ತೆ ಹಾಳಾಗಿದ್ದು, ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ತಿಳಿಸಲಾಗುವುದು. ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ತಗ್ಗಿದೆ.

ಉಕ್ಕಿ ಹರಿದ ಭದ್ರೆ: ಭದ್ರಾವತಿಯಲ್ಲಿ ಪ್ರವಾಹ ಸೃಷ್ಠಿ

Aug 01 2024, 01:52 AM IST
ಭದ್ರಾ ಜಲಾಶಯದಿಂದ ನದಿಗೆ ಬಿಡುಗಡೆಗೊಳಿಸಲಾಗುತ್ತಿದ್ದು, ನೀರಿನ ಪ್ರಮಾಣ ಬುಧವಾರ ಬೆಳಗಿನ ಜಾವ ಸುಮಾರು ೪೧ ಸಾವಿರ ಕ್ಯುಸೆಕ್ ಏರಿಕೆಯಾಗಿದೆ.

ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡಿ, ಮನೆ ನಿರ್ಮಿಸಲು ರೂಪಾಲಿ ಆಗ್ರಹ

Aug 01 2024, 12:35 AM IST
ವಾಹದಿಂದ ನೀರು ನುಗ್ಗಿದ ಮನೆಗಳಿಗೆ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ₹10 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದನ್ನು ₹10 ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಒತ್ತಾಯಿಸಿದರು.

ಬಿಡುವು ನೀಡಿ ಸುರಿದ ಮಳೆ: ಹಲವೆಡೆ ಪ್ರವಾಹ ಯಥಾಸ್ಥಿತಿ

Aug 01 2024, 12:33 AM IST
ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮಧ್ಯಾಹ್ನ ವರೆಗೆ ಮಳೆ ಬಿಡುವು ನೀಡಿ, ನಂತರ ಸುರಿಯಿತು. ಪ್ರವಾಹ ಪರಿಸ್ಥಿತಿ ಜಿಲ್ಲೆಯಲ್ಲಿ ಮತ್ತೆ ಮುಂದುವರಿಕೆಯಾಗಿದೆ. ಮಳೆ ಕೊಂಚ ಬಿಡುವು ಕೊಟ್ಟು ಸುರಿದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಪ್ರವಾಹ ಇಳಿಮುಖವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತ್ತೆ ಮಳೆಯಾದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಮತ್ತೆ ಪ್ರವಾಹ ಉಂಟಾಗಿದೆ.

ತಗ್ಗಿದ ಮಳೆ, ಪ್ರವಾಹ: ಬಹುತೇಕ ಸಹಜ ಸ್ಥಿತಿಗೆ ದ.ಕ.

Aug 01 2024, 12:28 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಪ್ರವಾಹ ಪೀಡಿತ ಹಾಗೂ ಮಳೆ ಹಾನಿ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾವೇರಿ ಪ್ರವಾಹ: ಕುಶಾಲನಗರ ತಗ್ಗು ಪ್ರದೇಶ ಜಲಕಂಟಕ

Aug 01 2024, 12:24 AM IST
ಕಾವೇರಿ ಪ್ರವಾಹದಿಂದ ಜಲ ಕಂಟಕಕ್ಕೆ ಸಿಲುಕಿದ ಕುಶಾಲನಗರದ ತಗ್ಗು ಪ್ರದೇಶದ ಬಡಾವಣೆಗಳಲ್ಲಿ ನೀರು ಆವರಿಸಿದ್ದು, ಕಾವೇರಿಯಲ್ಲಿ ಪ್ರವಾಹ ಇನ್ನೂ ಕಡಿಮೆಯಾಗಿಲ್ಲ. ಮಂಗಳವಾರ ಸಂಜೆ ವೇಳೆಗೆ ಕುಶಾಲನಗರದ ಸಾಯಿ ಬಡಾವಣೆ ಮತ್ತು ಬಸಪ್ಪ ಬಡಾವಣೆಗಳಿಗೆ ನೀರು ನುಗ್ಗಿದ್ದು ಸುಮಾರು 25ಕ್ಕೂ ಅಧಿಕ ಕುಟುಂಬ ಸದಸ್ಯರು ಮನೆಯಿಂದ ಸ್ಥಳಾಂತರಗೊಂಡಿದ್ದಾರೆ.

ನಾಪೋಕ್ಲು: ಮಳೆ ತಗ್ಗಿದರೂ, ಪ್ರವಾಹ ತಗ್ಗಿಲ್ಲ

Aug 01 2024, 12:17 AM IST
ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ಮಳೆ ಬಿಡುವು ಕೊಟ್ಟಿದ್ದರೂ ಜಲಾವೃತಗೊಂಡ ಹಲವು ಸಂಪರ್ಕ ರಸ್ತೆಗಳಲ್ಲಿ ಪ್ರವಾಹ ತಗ್ಗಿಲ್ಲ. ಸಮೀಪದ ಕೊಟ್ಟಮುಡಿಯ ಜಂಕ್ಷನ್ ನಲ್ಲಿ ಕಾವೇರಿ ನದಿ ಪ್ರವಾಹ ರಸ್ತೆ ಮೇಲೆ ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು ನಾಪೋಕು- ಬೆಟಗೇರಿ ಮಾರ್ಗವಾಗಿ ಮಡಿಕೇರಿ, ನಾಪೋಕು - ಮೂರ್ನಾಡು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಪ್ರವಾಹ, ಗುಡ್ಡ ಕುಸಿತದಿಂದ ಕೇರಳದಲ್ಲಿ ಕೊಚ್ಚಿ ಹೋದ ಕನ್ನಡಿಗರ ಪತ್ತೆ ಕಾರ್ಯ ಚುರುಕು

Aug 01 2024, 12:16 AM IST
ಕೇರಳ‌ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದ್ದು ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ಚಾಮರಾಜನಗರ ತಹಸೀಲ್ದಾರ್‌ಗಳ ತಂಡ ಭೇಟಿ ನೀಡುತ್ತಿದ್ದಾರೆ.

ಹೊನ್ನಾಳಿ ಬಳಿ ತುಂಗಭದ್ರಾ ಪ್ರವಾಹ: 96 ಜನರ ಸ್ಥಳಾಂತರ

Aug 01 2024, 12:15 AM IST
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ಹಾಗೂ ಭದ್ರಾ ಜಲಾಶಯಗಳಿಂದ ನದಿಗಳಿಗೆ ನೀರು ಬಿಟ್ಟ ಕಾರಣ ಹೊನ್ನಾಳಿ ಪಟ್ಟಣ ಸೇರಿ ನದಿಪಾತ್ರದದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕಪಿಲಾ ನದಿಯಲ್ಲಿ ಪ್ರವಾಹ: ಮುಳುಗಡೆಯಾದ ಹಲವು ದೇವಾಲಯಗಳು

Aug 01 2024, 12:15 AM IST
ಕಪಿಲಾ ನದಿಯಲ್ಲಿ ಸಾಗರೋಪಾದಿಯಲ್ಲಿ ನೀರು ಹರಿಯುತ್ತಿರುವುದರಿಂದ ಮೈಸೂರು- ಕೇರಳ ಮತ್ತು ಊಟಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಪಟ್ಟಣದ ಮಲ್ಲನಮೂಲೆ ಸಮೀಪ ನದಿಯ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗದಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved