ಸಾಂಕ್ರಾಮಿಕ ರೋಗಕ್ಕೆ ಆಹ್ವಾನ ನೀಡುತ್ತಿರುವ ಬಡಾವಣೆ
Jul 12 2024, 01:36 AM ISTಚರಂಡಿಯಿಲ್ಲದೆ ರಸ್ತೆಯಲ್ಲೇ ಮಡುಗಟ್ಟಿ ನಿಂತಿರುವ ಕಲುಷಿತ ನೀರು, ಈ ನೀರ ಮೇಲೆಲ್ಲಾ ಸೊಳ್ಳೆಗಳ ಹಿಂಡು, ಮಳೆ ಬಂದರೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಕಲುಷಿತ ನೀರು, ಹಳ್ಳ ಬಿದ್ದ ರಸ್ತೆಗಳಲ್ಲಿ ಸಾಗುವ ಅನಿವಾರ್ಯತೆ ಈ ದುಸ್ಥಿತಿ ತಾಲೂಕಿನ ದುಗ್ಗಹಟ್ಟಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಕಂದಹಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ಸ್ಥಿತಿಗತಿ ಆಗಿದೆ.