ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು ದೊಡ್ಡದಿದೆ. ಮೆಟ್ರೋ 1ನೇ ಹಂತದಲ್ಲಿ ರಾಜ್ಯ ಸರ್ಕಾರ ಭೂಮಿ ಸೇರಿ ಶೇ.30ರಷ್ಟು ಅನುದಾನ ನೀಡಿದೆ. ಇನ್ನು ಕೇಂದ್ರ ಸರ್ಕಾರ ಶೇ.25 ಮತ್ತು ಉಳಿದ ಶೇ.45ರಷ್ಟು ಹಣವನ್ನು ಸಾಲದ ರೂಪದಲ್ಲಿ ಬಿಎಂಆರ್‌ಸಿಎಲ್ ಪಡೆದಿತ್ತು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವ್ಯೆಸಗುತ್ತಿದ್ದರೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನರೇಂದ್ರ ಮೋದಿ ಅವರನ್ನು ನ್ಯಾಯ ಕೇಳುವ ಧೈರ್ಯ ಮಾಡುತ್ತಿಲ್ಲ, ಅವರು ನ್ಯಾಯ ಕೇಳದಿದ್ದರೆ ಕರ್ನಾಟಕದ ಜನತೆಗೆ ಮಾಡುವ ದ್ರೋಹವಾಗಿದೆ ಎಂದರಲ್ಲದೆ, ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ನೀಡುತ್ತಿದೆ.
ಚುನಾವಣಾ ಆಯೋಗವು ಈಗ ಪ್ರಜಾಪ್ರಭುತ್ವದ ಕಾವಲುಗಾರನಾಗಿ ಉಳಿದಿಲ್ಲ. ತನ್ನ ಜವಾಬ್ದಾರಿ ಮರೆತು ಕಾರ್ಯಾಂಗದ ಕೈಗೊಂಬೆಯಾಗಿದೆ. ಇದರ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಸಂಸತ್ತಿನಿಂದ ಜನರ ನ್ಯಾಯಾಲಯದ ಮುಂದೆ ಕೊಂಡೊಯ್ಯಲಿದೆ.
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ನೆಪದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಳೆದ ಎರಡು ವರ್ಷಗಳಿಂದ ನೂರಾರು ಕೋಟಿ ರು. ಅವ್ಯವಹಾರ ನಡೆಸಿದ್ದಾರೆ ಎಂದು ಆಪಾದಿಸಿರುವ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಕೆ.ಎಸ್.ನವೀನ್