10 ದಿನದಲ್ಲಿ ಅನುದಾನ ನೀಡದಿದ್ದಲ್ಲಿ ಸಿಎಂ ಮನೆ ಮುಂದೆ ಧರಣಿ: ಬಿಜೆಪಿ ಶಾಸಕರ ಎಚ್ಚರಿಕೆ
Sep 17 2024, 12:54 AM ISTಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿಜೆಪಿಯ ಶಾಸಕರೇ ಹೆಚ್ಚಿದ್ದಾರೆ ಎನ್ನುವ ಕಾರಣಕ್ಕೆ ಈ ಜಿಲ್ಲೆಗಳನ್ನು ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಕಳೆದ ವರ್ಷ ಜಿಲ್ಲೆಗೆ ಆಗಮಿಸಿ ತ್ರೈಮಾಸಿಕ ಸಭೆ ನಡೆಸಿದ ಸಿಎಂ, ಆ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 50 ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಒಂದು ರು. ಬಿಡುಗಡೆಯಾಗಿಲ್ಲ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.