ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಸಕಲೇಶಪುರದಲ್ಲಿ ಬಿಜೆಪಿ ಪ್ರತಿಭಟನೆ

Sep 12 2024, 01:52 AM IST
ಕಳೆದ ಲೋಕಭಾ ಚುನಾವಣೆ ಸಂರ್ಧಭದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸುತ್ತಾರೆ ಎಂದು ಅಪಪ್ರಚಾರ ಮಾಡಿದ ರಾಹುಲ್ ಗಾಂಧಿರವರು, ಇದೀಗ ದಲಿತರ ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ವಿದೇಶದಲ್ಲಿ ಮಾತನಾಡಿರುವುದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಇದಲ್ಲದೆ ವಿದೇಶಗಳಿಗೆ ಅವರು ಹೋದಾಗ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕೂಡಲೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಸಕಲೇಶಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.