ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಜನಾಂದೋಲನದ ಮೂಲಕ ಹಸಿಹಸಿ ಸುಳ್ಳುಗಳನ್ನು ಹೇಳಿ ಜನರಲ್ಲಿ ತಪ್ಪು ಭಾವನೆ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ- ಜೆಡಿಎಸ್ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಟೀಕಿಸಿದರು.
ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ವಿಫಲರಾದ ಹಿನ್ನೆಲೆಯಲ್ಲಿ ಇದೀಗ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಅದು ಯಾವತ್ತೂ ಯಶಸ್ವಿಯಾಗುವುದಿಲ್ಲ. ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಾಗಿದ ಪಾದಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಯಿತು. ಮಧ್ಯಾಹ್ನದ ವೇಳೆಗೆ ನಗರದ ಸಕ್ಕರೆ ವೃತ್ತದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಪಾದಯಾತ್ರೆಗೆ ಸೇರ್ಪಡೆಯಾದರು.