ಬಿಜೆಪಿ, ಜೆಡಿಎಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Aug 07 2024, 01:03 AM ISTಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ವಿನಾಕಾರಣ ಆಪಾದನೆ ಮಾಡಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಅಲ್ಲದೇ, ರಾಜ್ಯಪಾಲರು ಸಹ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಅಹಿಂದ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ರ್‍ಯಾಲಿ ನಡೆಸಲಾಯಿತು.