‘2025ರ ಸೆ.17ಕ್ಕೆ ಪ್ರಧಾನಿ ನರೇಂದ್ರ ಮೋದಿಗೆ 75 ವರ್ಷ ತುಂಬುತ್ತದೆ. ಹೀಗಾಗಿ 2025ರ ಬಳಿಕ ಅವರು ಪ್ರಧಾನಿಯಾಗಿರುವುದಿಲ್ಲ. ಅಮಿತ್ ಶಾ ಪ್ರಧಾನಿಯಾಗಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ನೈಋತ್ಯ ಪದವೀಧರ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ ಅವರಿಗೆ ಟಿಕೆಟ್ ನೀಡಿದ್ದು ಸ್ಪರ್ಧೆ ಖಚಿತವಾಗಿದೆ.
ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್ ಹೊಂದಿದೆ.
ಎಸ್‌ಸಿ, ಎಸ್ಟಿ, ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂಬ ಬಿಜೆಪಿ ಆರೋಪಗಳ ನಡುವೆಯೇ, ಕಳೆದ 60 ವರ್ಷದಲ್ಲಿ ಭಾರತದಲ್ಲಿ ಹಿಂದೂಗಳ ಸಂಖ್ಯೆ ಕುಸಿತವಾಗಿದ್ದರೆ, ಮುಸ್ಲಿಮರ ಸಂಖ್ಯೆಯಲ್ಲಿ ಹೆಚ್ಚಳ ದಾಖಲಾಗಿದೆ ಎಂದು ವರದಿಯೊಂದು ಹೇಳಿದೆ.