ಬಿಜೆಪಿ ಕಾರ್ಯಕರ್ತರಿಗೆ ಇರಿತ: ಐವರ ಬಂಧನ
Jun 11 2024, 01:35 AM ISTಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಭಾನುವಾರ ರಾತ್ರಿ ಉಳ್ಳಾಲ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣದಲ್ಲಿ ಬೋಳಿಯಾರು ಮಸೀದಿ ಎದುರುಗಡೆ ಘೋಷಣೆ ಕೂಗಿದ ಆರೋಪದಲ್ಲಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ದವೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.