ದ.ಕ.ಜಿಲ್ಲೆಯಲ್ಲಿ ಮಾಜಿ ಯೋಧನನ್ನು ಕಣಕ್ಕೆ ಇಳಿಸಿದ ಬಿಜೆಪಿ ವರಿಷ್ಠರು
Mar 14 2024, 02:06 AM ISTಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.