ಚುನಾವಣೆಗಳು ಬಂದಾಗ ಜನರನ್ನು ಸೆಳೆಯಲು ರಾಜಕೀಯ ಪಕ್ಷಗಳು ಭರವಸೆಗಳ ಮೂಲಕ ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುವುದು ಸಹಜ. ಆದರೆ, ಬಿಜೆಪಿಯು ಜನರನ್ನು ತಪ್ಪು ದಾರಿಗೆಳೆಯುವುದನ್ನೇ ಅಜೆಂಡಾ ಮಾಡಿಕೊಂಡಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.