ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ: ಎಸ್.ಆರ್.ಹಿರೇಮಠ
Mar 06 2024, 02:15 AM IST ಅನಾದಿಯಿಂದಲೂ ಸಮಾಜದ ಸಾಧು, ಸಂತರು, ಸೂಫಿಗಳು, ತತ್ವ ಪದಕಾರರು ಪೋಷಿಸಿಕೊಂಡು ಬಂದ ಸೌಹಾರ್ದ ಸಂಸ್ಕೃತಿಯನ್ನೇ ಬಿಜೆಪಿ ನಾಶಪಡಿಸುತ್ತಿದೆ. ಒಕ್ಕೂಟದ ಸರ್ಕಾರವು 2020ರಲ್ಲಿ ರೈತ ವಿರೋಧಿ, ಕೃಷಿ ವಿರೋಧಿಯಾದ ಕೃಷಿ ಕಾಯ್ದೆಗಳ ಜಾರಿಗೊಳಿಸಿತ್ತು. ದೆಹಲಿ ಗಡಿಗಳಲ್ಲಿ ರೈತರು ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ 13 ತಿಂಗಳ ಕಾಲ ನಿರಂತರವಾಗಿ ಪ್ರಬರ ಹೋರಾಟ ನಡೆಸಿದ ಪರಿಣಾಮ ಕರಾಳವಾದ ಮೂರೂ ಕಾಯ್ದೆಗಳ ಕೇಂದ್ರ ಹಿಂಪಡೆಯಿತು.