ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಂಡಿರುವ ರಾಜ್ಯ ಬಿಜೆಪಿ ಫೆ.3ರಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕಾರಿಣಿ ಸಭೆ ಹಾಗೂ ಫೆಬ್ರವರಿಯಲ್ಲಿ ‘ನಾರಿ ಶಕ್ತಿ ವಂದನಾ’ ಸಮಾವೇಶಗಳನ್ನು ನಡೆಸುವ ತೀರ್ಮಾನವನ್ನು ಕೈಗೊಂಡಿದೆ.
ಬಿಹಾರ ರಾಜಕೀಯ ಬೃಹನ್ನಾಟಕ ಶನಿವಾರವೂ ಮುಂದುವರೆದಿದ್ದು, ಬಿಜೆಪಿ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮರುಮೈತ್ರಿಗೆ ಅಂತಿಮ ವೇದಿಕೆ ಸಿದ್ಧವಾಗಿದೆ.
ಬಿಹಾರದಲ್ಲಿ ರಾಜಕೀಯ ವಿಪ್ಲವ ಮುಂದುವರಿದಿದ್ದು, ಆರ್ಜೆಡಿ ಜತೆಗಿನ ಮೈತ್ರಿ ಮುರಿದುಕೊಂಡು ಜೆಡಿಯು ನೇತಾರ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ವಿಜಯೇಂದ್ರ ಬಿಜೆಪ ರಾಜ್ಯ ಅಧ್ಯಕ್ಷ ಆದ ನಂತರದ ಮೊದಲ ಸಭೆ ನಡೆಯಲಿದೆ. ಇದರಲ್ಲಿ 900 ಆಹ್ವಾನಿತರು ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ವಾಪಸ್ ಹೋಗಿದ್ದರಿಂದ ನಮಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಕಳೆದ ಚುನಾವಣೆ ವೇಳೆ ಬಿಜೆಪಿಯಲ್ಲಿ ನೋವಾಗಿದೆ ಎಂದು ಅವರೇ ಬಂದರು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತರು.