ಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಬೇಕೆಂದು ಹಠ ಇದೆ. ಆದರೆ, ಶಾಸಕರ ಬಲವಿಲ್ಲ. ಹೇಗಾದರೂ ಮಾಡಿ ಸಿದ್ದರಾಮಯ್ಯನವರ ಮನಸ್ಸು ಗೆಲ್ಲಲು ಪ್ರಯತ್ನ ನಡೆಸಿದ್ದಾರೆ ಎಂದು ತಿವಿದರು.
ಶೋಕಾಸ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಮುಂದೆ ಹಾಜರಾಗಿ ಮಾಹಿತಿ ನೀಡಿದ ಬೆನ್ನಲ್ಲೇ 2ನೇ ಹಂತದ ವಕ್ಫ್ ಹೋರಾಟ ನಡೆಸಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಾಗಿದ್ದಾರೆ.