ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಆಲೂರಿನಲ್ಲಿ ಬಿಜೆಪಿ ಪ್ರತಿಭಟನೆ
Sep 13 2024, 01:31 AM ISTದೇಶದಲ್ಲಿ ರಾಹುಲ್ ಗಾಂಧಿ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕೈಯಲ್ಲಿ ಸಂವಿಧಾನ ಪುಸ್ತಕ ಹಿಡೀತಾರೆ ಆದರೆ ಮನಸ್ಸಿನಲ್ಲಿ ಸಂವಿಧಾನ, ಮೀಸಲಾತಿ ವಿರೋಧಿ ನಿಲುವು ಇಟ್ಟುಕೊಂಡಿದ್ದಾರೆ. ವಿದೇಶದಲ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಸಾಕ್ಷಿ. ಈ ಹೇಳಿಕೆಯನ್ನು ಆಲೂರು ಕಟ್ಟಾಯ ಮಂಡಲದ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸುತ್ತೇವೆ. ದೇಶವನ್ನು ವಿಭಜಿಸುವ ಶಕ್ತಿಗಳ ಜೊತೆ ನಿಂತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಆಕ್ರೋಶ ಹೊರಹಾಕಿ ಆಲೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.