ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕೇಸ್ ಹಾಕಿದರೆ ಸಹಿಸಲ್ಲ
Jun 26 2024, 12:38 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಗುಡುಗಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುತ್ತೇವೆ ಎಂಬ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದರೇ ಮುಂದಾಗುವ ಅನಾಹುತಗಳಿಗೆ ಪೊಲೀಸ್ ಇಲಾಖೆಯೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.