ವಿಜಯಪುರ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ
Mar 29 2025, 12:32 AM ISTಕನ್ನಡಪ್ರಭ ವಾರ್ತೆ ವಿಜಯಪುರ: ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ಕುರಿತು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆ ಬಗ್ಗೆ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಠರಾವು ಪಾಸು ಮಾಡಿದ ಪ್ರತಿ ಓದಿದರು.