ಬಿಜೆಪಿ ಶೇ.40, ಕೈ ಸರ್ಕಾರ ಇನ್ನೂ ಹೆಚ್ಚು ಭ್ರಷ್ಟ: ಬಿ.ಶಿವರಾಂ
Feb 02 2024, 01:04 AM ISTಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಬಿಜೆಪಿ ೪೦ ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದೆವು. ಆದರೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶಿವರಾಂ ತಮ್ಮದೇ ಸರ್ಕಾರದ ವಿರುದ್ಧ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.