ಮಂಕು ಕವಿದಿದ್ದ ಬಿಜೆಪಿ ಕಾರ್ಯಕರ್ತರು ಪುಟಿದೇಳುವ ಕಾಲ
Dec 25 2023, 01:30 AM ISTವಿಧಾನಸಭೆ ಚುನಾವಣೆ ನಂತರ ಮಂಕು ಕವಿದಂತಿದ್ದ ರಾಜ್ಯ ಬಿಜೆಪಿ ಕಾರ್ಯಕರ್ತರು ಮತ್ತೆ ಪುಟಿದೇಳುವ ಕಾಲ ಮರಳಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಗರದ ಕೆಬಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಮಗೆ ಸಾಕಷ್ಟು ಹಿನ್ನಡೆಯಾಗಿದ್ದು ನಿಜವಾದರೂ, ಬಹುಮತ ಬಂದ ಕಾಂಗ್ರೆಸ್ ದಿನದಿನಕ್ಕೂ ದುರಂಹಾರದಿಂದ ವರ್ತಿಸುತ್ತಲೇ ಇದೆ ಎಂದರು.