ಅತ್ತು, ಕರೆದು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ
Nov 12 2023, 01:00 AM ISTರಾಜ್ಯ ಬಿಜೆಪಿ ನಾಯಕರು ಅತ್ತು, ಕರೆದು ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವಂತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ ಶೆಟ್ಟರ ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದರು.