ಸ್ಮಾರ್ಟ್ ಮೀಟರ್ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು
Jul 17 2025, 01:45 AM ISTರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯ ಟೆಂಡರ್ ಕಾನೂನು ಬಾಹಿರವಾಗಿದ್ದು, ಟೆಂಡರ್ ಮೂಲಕ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತಿತರರ ವಿರುದ್ಧ ಶಾಸಕ ಡಾ। ಸಿ.ಎನ್.ಅಶ್ವತ್ಥ ನಾರಾಯಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.