ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಬಿಬಿಎಂಪಿ ಅಧಿಕಾರಿಗಳ ರಜೆ ರದ್ದು
Dec 01 2024, 01:34 AM ISTರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು ರಜೆ ದಿನವಾದ ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.