ಬೆಂಗಳೂರು ಮಾದರಿಯಲ್ಲಿ ಸುಸಜ್ಜಿತ ಬಾಲ ಭವನ
Dec 19 2024, 01:32 AM ISTರಾಜ್ಯದಲ್ಲೇ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಆರೋಗ್ಯ, ಶಿಕ್ಷಣ, ಮನೋರಂಜನೆಯ ಸಕಾರಾತ್ಮಕ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಿ, ಪೂರ್ಣ ವ್ಯಕ್ತಿತ್ವ ರೂಪಿಸುವ ಉದ್ದೇಶದಿಂದ ಬಾಲಭವನವನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮಿನಿ ರೈಲು, ಫ್ಯಾಂಟಸಿ ಪಾರ್ಕ್, ವಿಜ್ಞಾನ ಉದ್ಯಾನ, ಥಿಯೇಟರ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಿರುವ ಬೆಂಗಳೂರು ಮಾದರಿಯ ಸುಸಜ್ಜಿತ ಬಾಲಭವನ ನಿರ್ಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.