ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ 12 ರಂದು ಬೆಂಗಳೂರು ಚಲೋ
Aug 08 2024, 01:37 AM ISTಚಿಕ್ಕಮಗಳೂರು, ಕಳೆದ 2016 ಕ್ಕಿಂತ ಮೊದಲು 1 ರಿಂದ 7 ಮತ್ತು 1 ರಿಂದ 8 ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5 ಎಂದು ಪರಿಗಣಿಸಿ ಸರ್ಕಾರ ಆದೇಶಿಸಿದ್ದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯ ವಾಗಿದ್ದು, ಈ ಆದೇಶವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಆ.12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಬುಧವಾರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಅವರಿಗೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.