ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್‌ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಉದ್ಯೋಗ ಮಾತ್ರವಲ್ಲ, ವ್ಯಾಪಾರ ಹಾಗೂ ಉದ್ಯಮ ಕ್ಷೇತ್ರದ ಅವಕಾಶಗಳಿಂದಲೂ ಕನ್ನಡಿಗರು ವಂಚಿತರಾಗುತ್ತಿದ್ದು, ಉದ್ದಿಮೆಗಳೂ ಪರಭಾಷಿಕರ ಪಾಲಾಗುವಂತಹ ವಾತಾವರಣ ನಿರ್ಮಾಣವಾಗಿದೆ.