ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ
May 15 2024, 01:33 AM ISTಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.