ಕಾಡಾನೆಗಳಿಂದ ಅಪಾರ ಬೆಳೆ ಹಾನಿ
Aug 27 2024, 01:32 AM ISTಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಬಕ್ರವಳ್ಳಿ, ಮೊಗಸಾವರ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಕಳೆದ ಒಂದು ವಾರದಿಂದ ಬೀಡು ಬಿಟ್ಟು ಕೃಷಿಕರ ಮತ್ತು ಕಾಫಿ ಬೆಳೆಗಾರರ ಬೆಳೆಗಳನ್ನು ಹಾನಿ ಮಾಡುತ್ತಿದ್ದು, ಸಂಬಂಧಪಟ್ಟ ಇಲಾಖೆಯವರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಬಕ್ರವಳ್ಳಿ ಗ್ರಾಮದ ನಂದೀಶ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಪೃಥ್ವಿ ಅವರ ತೋಟಗಳಿಗೆ ಭುವನೇಶ್ವರಿ ಹೆಸರಿನ ಕಾಡಾನೆಗಳ ಹಿಂಡು ದಾಳಿ ನಡೆಸಿ ಕಾಫಿ, ಮೆಣಸು ಹಾಗೂ ಗೇಟ್, ಪೈಪ್ಲೈನ್ಗಳನ್ನು ತುಳಿದು ಸಂಪೂರ್ಣ ಹಾನಿ ಮಾಡಿವೆ.