ಮಡಿಕೇರಿಯಲ್ಲಿ ಕಾಂಗ್ರೆಸ್ ಬೈಕ್ ರ‍್ಯಾಲಿ
Apr 20 2024, 01:04 AM ISTಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಮಡಿಕೇರಿ ನಗರದಲ್ಲಿ ಬೃಹತ್ ಬೈಕ್ ಹಾಗೂ ಆಟೋ ಜಾಥಾ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಮತಯಾಚಿಸಿತು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ ಎಂ ಮಂತರ್ ಗೌಡ, ಬಿಜೆಪಿ ಕೋಮು ದ್ವೇಷ ಬಿತ್ತಿ ವ್ಯವಸ್ಥೆ ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ. ಇದನ್ನು ಮತದ ಮೂಲಕ ವಿರೋಧಿಸಿ ತೋರಿಸಬೇಕು ಎಂದು ಕರೆ ನೀಡಿದ್ದಾರೆ.