ವಿವಿಧತೆಯಲ್ಲಿ ಏಕತೆ ತೋರುವ ಹೆಮ್ಮೆಯ ಭಾರತ
Sep 16 2024, 01:50 AM ISTಕನ್ನಡಪ್ರಭ ವಾರ್ತೆ ಆಲಮಟ್ಟಿ ಜಿಲ್ಲೆಯ ರಾಯಚೂರು ಗಡಿಯಿಂದ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಇಂದು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮಲ್ಲಿ ಮಾತನಾಡಿದರು.