ಭ್ರಷ್ಟ ಅಧಿಕಾರಿಗಳ ವಿರುದ್ಧ ಪಾರದರ್ಶಕ ತನಿಖೆ ಮಾಡಿ: ಭೀಮ್ ಸೇವಾ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್
Dec 15 2024, 02:03 AM ISTಲೋಕಾಯುಕ್ತ ಅಧಿಕಾರಿಗಳು ಅಪಾರ ಹಣ ಹಾಗೂ ಆಸ್ತಿ ಹೊಂದಿರುವ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅಂತಹ ಭ್ರಷ್ಟ ಅಧಿಕಾರಿಗಳನ್ನು ಪಾರದರ್ಶಕ ತನಿಖೆಗೆ ಒಳಪಡಿಸಬೇಕು ಎಂದು ಭೀಮ್ ಸೇವಾ ಸಮಿತಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ಒತ್ತಾಯಿಸಿದ್ದಾರೆ. ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಬಳಿಕ ಹೊಸಕೋಟೆಯಲ್ಲಿ ಮಾತನಾಡಿದರು.