ಶಾಲಾ ಮಾನ್ಯತೆ ನವೀಕರಣಕ್ಕಿರುವ ಕಠಿಣ ಮಾನದಂಡಗಳು, ಅಧಿಕಾರಿಗಳ ದೌರ್ಜನ್ಯ, ಲಂಚ ಬೇಡಿಕೆಯಿಂದ ಶಾಲೆಗಳನ್ನು ನಡೆಸುವುದು ಕಷ್ಟವಾಗಿದ್ದು, ಈ ಸಮಸ್ಯೆಯನ್ನು ಗಮನಕ್ಕೆ ತಂದರೂ ಸರ್ಕಾರ ಪರಿಹರಿಸದೇ ಇರುವುದನ್ನು ಖಂಡಿಸಿ, ವಿವಿಧ ಖಾಸಗಿ ಶಾಲಾ ಸಂಘಟನೆಗಳು ಆ. 15ರಂದು ಕರಾಳ ದಿನ ಆಚರಣೆಗೆ ತೀರ್ಮಾನಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ತಾಕತ್ ಇದ್ದರೆ ಭ್ರಷ್ಟಾಚಾರದ ಪಿತಾಮಹ ಅಂದರೆ ಏನು? ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಲಿ. ಆಗ ಅವರನ್ನು ಬಿಜೆಪಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ತಿರುಗೇಟು ನೀಡಲು ಮುಂದಾಗಿರುವ ಕಾಂಗ್ರೆಸ್, ವಿಪಕ್ಷಗಳ ಪಾದಯಾತ್ರೆ ಸಾಗುವ ಮಾರ್ಗದ ಪ್ರಮುಖ ಸ್ಥಳಗಳಲ್ಲಿ ಬಿಜೆಪಿ ವಿರುದ್ಧ ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಿದೆ.