ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ
Nov 22 2024, 01:19 AM ISTಆರೋಗ್ಯ ಇಲಾಖೆಯಲ್ಲಿ ಆಸ್ಪತ್ರೆಗಳ ದುರಸ್ತಿ ಹೆಸರಿನಲ್ಲಿ ಆರೋಗ್ಯಾಧಿಕಾರಿ ಹಾಗೂ ಸಿಇಒ ಸೇರಿ ಕೋಟ್ಯಂತರ ರುಪಾಯಿ ಹಣ ಲೂಟಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಪ್ರವೀಣ್ ಗೌಡ ಗಂಭೀರವಾಗಿ ಆರೋಪಿಸಿದರು. ಹೋಬಳಿ ಮಟ್ಟದ ಸಮುದಾಯ ಆರೋಗ್ಯ ಕೇಂದ್ರಗಳನ್ನು ದುರಸ್ತಿ ಪಡಿಸಲು ರಾಜ್ಯದ ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ. ಅದರಂತೆ ಹಾಸನ ಜಿಲ್ಲೆಗೂ ಅತೀ ಹೆಚ್ಚು ಬಿಡುಗಡೆ ಮಾಡಲಾಗಿದೆ ಎಂದರು.