• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ತೆಕ್ಕೆಗೆ ಜಾರಿದ ಮದ್ದೂರು ಪುರಸಭೆ ಆಡಳಿತ ಮಂಡಳಿ

Sep 10 2024, 01:40 AM IST
ಮದ್ದೂರು ಪುರಸಭೆ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಕೋಕಿಲ ಅರುಣ್, ಉಪಾಧ್ಯಕ್ಷರಾಗಿ ಟಿ.ಆರ್.ಪ್ರಸನ್ನಕುಮಾರ್ ತಲಾ 15 ಮತ ಪಡೆದು ಆಯ್ಕೆಯಾದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 75 ಸಾವಿರಕ್ಕೂ ಅಧಿಕ ಸದಸ್ಯತ್ವ ನೋಂದಣಿ : ಸಿ.ಕೆ. ಸತೀಶ್

Sep 03 2024, 01:45 AM IST
ಮದ್ದೂರು ಕ್ಷೇತ್ರ ವ್ಯಾಪ್ತಿ ಐದು ಹೋಬಳಿಗಳ 185 ಗ್ರಾಮಗಳ ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 300 ಸದಸ್ಯತ್ವ ಗುರಿ ಗೊಂದಲಾಗಿದೆ. ಸೆ.2 ರಿಂದ ಅ.2ರವರೆಗೆ ಎರಡು ಹಂತದಲ್ಲಿ ನಿರಂತರವಾಗಿ ನಡೆಯುವ ಸದಸ್ಯತ್ವ ಅಭಿಯಾನದಲ್ಲಿ ಕ್ಷೇತ್ರದಿಂದ ಒಟ್ಟು 75,900 ಸದಸ್ಯತ್ವದ ಗುರಿ ಹೊಂದಲಾಗಿದೆ.

ಮದ್ದೂರು ಪ್ರವಾಸಿ ಮಂದಿರದ ಆವರಣದಲ್ಲಿರುವ ಹಳೇಕಟ್ಟಡ ನೆಲಸಮ

Aug 12 2024, 01:02 AM IST
ಹಾಲಿ ಪ್ರವಾಸಿ ಮಂದಿರದ ಆವರಣದಲ್ಲಿರುವ ಹಳೆ ಕಟ್ಟಡ ಬ್ರಿಟಿಷರ ಕಾಲದ ಕಟ್ಟಡವಾಗಿದೆ. ಅದನ್ನು ತೆರವುಗೊಳಿಸಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಜೊತೆಗೆ ಕಟ್ಟಡದಲ್ಲಿ ಕನಿಷ್ಠ 10 ಕೊಠಡಿ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು.

ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದರೂ 25 ದಿನವಾದರೂ ಮದ್ದೂರು ಕೊನೆಯ ಭಾಗಕ್ಕೆ ನೀರಿಲ್ಲ: ಶಾಸಕ ಮಧು ಮಾದೇಗೌಡ

Aug 06 2024, 12:43 AM IST

ಕೆಆರ್‌ಎಸ್‌ನಿಂದ ಮೊದಲು ಕೊನೆ ಭಾಗಕ್ಕೇ ಪೊಲೀಸರ ರಕ್ಷಣೆಯೊಂದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದ್ದರು. ಆದರೂ ಸಹ ಕೊನೆ ಭಾಗಕ್ಕೆ 25 ದಿನಗಳು ಕಳೆದರು ನೀರು ಬಂದಿಲ್ಲ.  

ಮದ್ದೂರು ತಾಲೂಕಿನಲ್ಲಿ ಡೆಂಘೀ ಜ್ವರದ ಪ್ರಕರಣಗಳು ನಿಯಂತ್ರಣ: ಶಾಸಕ ಕೆ.ಎಂ.ಉದಯ್ ಶ್ಲಾಘನೀಯ

Jul 23 2024, 12:42 AM IST
ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಡೆಂಘೀ ಜ್ವರ ನಿಯಂತ್ರದಲ್ಲಿದೆ. ಮುಂದಿನ ದಿನಗಳಲ್ಲಿ ತಾವು ಪಟ್ಟಣ ವ್ಯಾಪ್ತಿಗಳಲ್ಲಿ ಸಂಚಾರ ನಡೆಸಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸುವುದರ ಜೊತೆಗೆ ಡೆಂಘೀ ನಿಯಂತ್ರಣ ದಲ್ಲಿ ಸಾರ್ವಜನಿಕರ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು.

ಕವಿತೆಯ ಹುಟ್ಟು ಪಡೆಯಲು ಕರ್ತೃವಿಗೆ ಕವಿಯ ಮನಸ್ಸಿರಬೇಕು: ಸಾಹಿತಿ ಮದ್ದೂರು ದೊರೆಸ್ವಾಮಿ

Jul 22 2024, 01:23 AM IST
ಕವಿತೆಯ ಹುಟ್ಟಿಗೆ ಕವಿ ಮನಸ್ಸು ಬೇಕು, ಕವಿತೆ ಎನ್ನುವುದು ಹುಟ್ಟುವುದೇ ಹೊರತು ಅದನ್ನ ಕಟ್ಟಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಕವಿ ಮನಸ್ಸಿರಬೇಕು ಎಂದು ಸಾಹಿತಿ ಮದ್ದೂರು ದೊರೆಸ್ವಾಮಿ ಹೇಳಿದರು. ಕೊಳ್ಳೇಗಾಲದಲ್ಲಿ ಕವಿಗೋಷ್ಠಿಯಲ್ಲಿ ಮಾತನಾಡಿದರು.

ಮದ್ದೂರು ಪುರಸಭೆ ಕಂದಾಯ ವಿಭಾಗದಲ್ಲಿ ಭಾರೀ ಅಕ್ರಮ: ಭ್ರಷ್ಟಾಚಾರ ಪತ್ತೆಗೆ ತನಿಖಾ ಆಯೋಗ ರಚಿಸಿ

Jul 09 2024, 12:47 AM IST
ಮದ್ದೂರು ಪುರಸಭೆಯಲ್ಲಿ 2018ರ ನಂತರ ಕಾರ್ಯನಿರ್ವಹಿಸಿರುವ ಕೆಲವು ಮುಖ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿಯಮ ಬಾಹಿರವಾಗಿ ಅಕ್ರಮವಾಗಿ ಇ-ಸ್ವತ್ತು ಮಾಡಿ ಸರ್ಕಾರಕ್ಕೆ ಮತ್ತು ಪುರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಮದ್ದೂರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ

Jul 05 2024, 12:56 AM IST

ಇತಿಹಾಸವುಳ್ಳ ಮದ್ದೂರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದು ಸಾಗಾಣಿಕೆ ಮಾಡುತ್ತಿದ್ದ ಜೆಸಿಬಿ ಯಂತ್ರ ಹಾಗೂ ಟ್ರ್ಯಾಕ್ಟರ್‌ಗಳನ್ನು ಪೋಲಿಸರು ಗುರುವಾರ ಬೆಳಗ್ಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಮಂಡ್ಯ- ಮದ್ದೂರು ಭಾಗದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಎಚ್ಡಿಕೆಗೆ ಮನವಿ

Jun 29 2024, 12:31 AM IST
ಮಂಡ್ಯ ಅಥವಾ ಮದ್ದೂರು ತಾಲೂಕಿನಲ್ಲಿ ಕೇವಲ ಸಣ್ಣಪುಟ್ಟ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದರಿಂದ ಯಾವುದೇ ಅನುಕೂಲವಾಗುವುದಿಲ್ಲ. ಹೀಗಾಗಿ ಬೃಹತ್ ಕೈಗಾರಿಕೆ ತೆರೆಯುವುದರಿಂದ ಸಣ್ಣ ಕೈಗಾರಿಕೆಗಳ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೂ ಸಾಧ್ಯವಾಗುತ್ತದೆ.

ಮದ್ದೂರು ಪುರಸಭೆ ಉದ್ಯಾನವನದಲ್ಲಿ ಉರುಳಿ ಬಿದ್ದ ಮರ

Jun 26 2024, 12:41 AM IST
ಸೋಮವಾರ ಸಂಜೆ ಬಿರುಸಿನಿಂದ ಬೀಸಿದ ಗಾಳಿಗೆ ಉದ್ಯಾನವನದಲ್ಲಿದ್ದ ತೆಂಗಿನ ಮರ ಒಂದು ಬುಡ ಸಮೇತ ಉರುಳಿ ಆಟದ ಉಪಕರಣಗಳ ಮೇಲೆ ಬಿದ್ದಿದೆ. ಇದರಿಂದ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಹಾನಿಗೊಂಡಿವೆ. ಇದೇ ವೇಳೆ ಉಪಕರಣಗಳೊಂದಿಗೆ ಆಟವಾಡುತ್ತಿದ್ದ ಕೆಲ ಮಕ್ಕಳು ಗಾಳಿಗೆ ಹೆದರಿ ದೂರ ಸರಿದ ಪರಿಣಾಮ ಯಾವುದೇ ಅನಾಹುತ ಉಂಟಾಗಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved