ತಾಲೂಕಿನಾದ್ಯಂತ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ
Jan 18 2024, 02:05 AM ISTಗುಳೇದಗುಡ್ಡ: ಪಟ್ಟಣದಲ್ಲಿ ಬುಧವಾರ ವಿಶ್ವಹಿಂದು ಪರಿಷತ್ ವತಿಯಿಂದ ಸಂಕೀರ್ತನ ಯಾತ್ರೆ ನಡೆಯಿತು. ವಿಶ್ವಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವು ಮೇಲ್ನಾಡ ಮಾತನಾಡಿ, ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ದೇಶಾದ್ಯಂತ ಐದು ಲಕ್ಷ ಗ್ರಾಮ ಹಾಗೂ ನಗರಗಳ ಮನೆ ಮನೆಗೆ ಮಂತ್ರಾಕ್ಷತೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಗುಳೇದಗುಡ್ಡ ತಾಲೂಕಿನಾದ್ಯಂತ ನಮ್ಮ ಕಾರ್ಯಕರ್ತರು ಪ್ರತಿಮನೆ ಮನೆಗೂ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ನೀಡಿ, ಪ್ರಭು ಶ್ರೀರಾಮನ ದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದರು.