ಮಕ್ಕಳ ಆರೈಕೆಗೆ ಕೂಸಿನ ಮನೆ ಸಹಕಾರಿ: ಪಾಟೀಲ

Dec 13 2023, 01:00 AM IST
ಕನ್ನಡಪ್ರಭ ವಾರ್ತೆ ಯಲಬುರ್ಗಾಮಕ್ಕಳೇ ಭವಿಷ್ಯದ ನಾಗರಿಕರು, ಮಕ್ಕಳ ಆರೈಕೆ ಅತಿ ಮುಖ್ಯವಾಗಿದ್ದು, ಗ್ರಾಪಂ ಕೂಸಿನ ಮನೆಗಳು ಸಹಕಾರಿಯಾಗಲಿವೆ ಎಂದು ತಾಪಂ ಇಒ ಸಂತೋಷ ಪಾಟೀಲ್ ಬಿರಾದಾರ್ ಹೇಳಿದರು.ಪಟ್ಟಣದ ತಾಪಂ ಸಾಮರ್ಥ್ಯ ಕೇಂದ್ರದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ ಅವಳಿ ತಾಲೂಕಿನ ಶಿಶುಪಾಲಕಿಯರಿಗೆ ಎರಡನೇ ಹಂತದ ೭ ದಿನಗಳ ಮಕ್ಕಳ ಆರೈಕೆದಾರರ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿಶುಪಾಲನ ಕೇಂದ್ರದಲ್ಲಿ ಮಕ್ಕಳಿಗೆ ಎಲ್ಲ ರೀತಿಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು