ಬಡವರ ಮನೆಗಳ ಸಾಲದ ಮೇಲಿನ ಬಡ್ಡಿ ಕಡಿತ, ಸರ್ಕಾರದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಡವರ ಮನೆಗಳ ನಿರ್ಮಾಣ, ಬೆಂಗಳೂರಿನಲ್ಲಿ ಕೆಎಚ್ಬಿಯ ಸೂರ್ಯ ನಗರ 4 ಹಂತದ ಯೋಜನೆಯಡಿ ನಿವೇಶನಗಳ ಹಂಚಿಕೆ ಸೇರಿದಂತೆ ವಸತಿ ಇಲಾಖೆಗೆ ಬಜೆಟ್ನಲ್ಲಿ ವಿಶೇಷ ಆದ್ಯತೆಗಳನ್ನು ನೀಡಲಾಗಿದೆ.
ಮನೆ ಬಾಗಿಲಿನ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ನಗದು, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.