ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.
ನಗರದಲ್ಲಿ ಶನಿವಾರ ಭಾರೀ ಮಳೆ ಬಂದು ಹಾನಿಗೆ ಒಳಗಾದ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳೊಂದಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.