ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಸೋಮವಾರದಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಆದರೆ, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಹರಿದಿದ್ದು, ಬೆಳೆಗಳು ಹಾನಿಗೀಡಾಗಿದೆ.
ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.