ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಗುರುವಾರ ವೇದಗಂಗಾ ಮತ್ತು ದೂದಗಂಗಾ ಒಂದು ಅಡಿ ಮತ್ತು ಕೃಷ್ಣಾ ನದಿಯ ನೀರಿನಮಟ್ಟ ಎರಡು ಅಡಿ ಏರಿಕೆಯಾಗಿದೆ.
ಇಸ್ರೇಲ್ ಮತ್ತು ಹಮಾಸ್ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.
ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.