ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರಿದಿದ್ದು, ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.
ಫೆಬ್ರವರಿ-ಮಾರ್ಚ್ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.