ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಈ ಮಧ್ಯೆ, ರಾಜಧಾನಿ ಬೆಂಗಳೂರು, ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.