ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.