ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.
ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.
ಧನಗರ್ (ಕುರುಬ) ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನ ವಿರೋಧಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್, ಬಿಜೆಪಿ ಸಂಸದ ಹೇಮಂತ್ ಸವರ ಸೇರಿದಂತೆ ಹಲವು ಆದಿವಾಸಿ ಸಮುದಾಯದ ನಾಯಕರು ವಿಧಾನಸೌಧ ಕಟ್ಟಡ (ಮಂತ್ರಾಲಯ)ದ 3ನೇ ಮಹಡಿಯಿಂದ ಕೆಳಗೆ ಹಾರಿದ ನಾಟಕೀಯ ಘಟನೆ ಶುಕ್ರವಾರ ನಡೆದಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ