ಕೇಂದ್ರ ಸರ್ಕಾರ ನಬಾರ್ಡ್ನಿಂದ ನೀಡಲಾಗುತ್ತಿದ್ದ ಅನುದಾನವನ್ನು ಶೇ.58ರಷ್ಟು ಕಡಿತಗೊಳಿಸಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಧರ್ಮಗುರು ಬಾಬಾ ರಾಮ್ ರಹೀಂ ಸಿಂಗ್ನನ್ನು ಬೆಂಬಲಿಸಿ ‘ಕ್ಷಮಾದಾನ’ ನೀಡಿದ್ದಕ್ಕೆ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಸುಖಬೀರ್ ಬಾದಲ್ ಅವರಿಗೆ ಸಿಖ್ಖರ ಪರಮೋಚ್ಚ ಧಾರ್ಮಿಕ ನ್ಯಾಯ ಮಂಡಳಿ ‘ಅಕಾಲ್ ತಖ್ತ್’, ಶೌಚಾಲಯ ಶುಚಿಗೊಳಿಸುವ ಶಿಕ್ಷೆ ವಿಧಿಸಿದೆ.
ವಾಲ್ಮೀಕಿ ಹಗರಣ, ದಲಿತರ ಹಣ ದುರ್ಬಳಕೆಯಿಂದ ಹಿಂದುಳಿದ ವರ್ಗದವರು, ದಲಿತರ ಶಕ್ತಿಯನ್ನು ಕಳೆದುಕೊಂಡಿರುವ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ನಿಂತಿದ್ದಾರೆ. ಮೈಸೂರಿನಲ್ಲಿ 101 ಕುರುಬರ ಮನೆಗಳಿಗೆ ವಕ್ಫ್ ಆಸ್ತಿ ಎಂದು ನೋಟೀಸ್ ಜಾರಿ ಮಾಡಿದ್ದರೂ ರಕ್ಷಣೆಗೆ ನಿಂತಿಲ್ಲ.