ಇಡಿ, ಸಿಬಿಐ, ಐಟಿ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ದ್ವೇಷದ ರಾಜಕಾರಣ ಹಾಗೂ ಇನ್ನೊಬ್ಬರನ್ನು ಮುಗಿಸೋದರಲ್ಲಿ ದೇವೇಗೌಡರು ನಂಬರ್ 1. ಅವರು ಯಾವುದೇ ಒಕ್ಕಲಿಗ ನಾಯಕರನ್ನು ಬೆಳೆಯಲು ಬಿಡಲ್ಲ.
ಬೊಮ್ಮಾಯಿ ಅವರು ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಜಿದ್ದಾಜಿದ್ದಿ ತೀವ್ರ ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರಿನ ಪಟ್ಟಾಭಿಷೇಕಕ್ಕೆ ಭಾರೀ ಕಸರತ್ತು ನಡೆಯುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ತಂತ್ರಗಾರಿಕೆ ನಡೆಸಿದೆ.