ಬಿಜೆಪಿ, ಜೆಡಿಎಸ್ ಶಾಸಕರು ಸೇರಿ ಎಲ್ಲಾ ಶಾಸಕರಿಗೂ ತಲಾ ₹10 ಕೋಟಿ ಅನುದಾನ ಬಿಡು ಗಡೆಗೆ ಸಹಿ ಹಾಕಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಇದೆ. ಮಹಜರ್ ಮಾಡಿ ತೆಗೆದುಕೊಂಡು ಬರುತ್ತಾರೆ. ಶಸ್ತ್ರಾಸ್ತ್ರ ಎಲ್ಲಿದೆ ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರವಾಗಿ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಶರಣಾದರು.
ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್ಎಂಪಿವಿ) ಮಾರಣಾಂತಿಕ ಅಥವಾ ಅಪಾಯಕಾರಿ ಅಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ, ಆರೋಗ್ಯ ತಜ್ಞರು ಹೇಳಿರುವುದರಿಂದ ಈ ಬಗ್ಗೆ ಜನ ಆತಂಕಗೊಳ್ಳದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.