ಭಾರತದಲ್ಲೇ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಆರಂಭಿಸಲಾದ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರ ‘ರಾಷ್ಟ್ರೀಯ ಉತ್ಪಾದನಾ ಮಿಷನ್’ ಸ್ಥಾಪಿಸುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿದ್ದಾರೆ
ಮೇಕ್ ಇನ್ ಇಂಡಿಯಾಗೆ ಪ್ರೋತ್ಸಾಹ ನೀಡುವ ಸಲುವಾಗಿ ಲ್ಯಾಪ್‌ಟಾಪ್ ಮತ್ತು ಗ್ಯಾಜೆಟ್‌ಗಳ ಆಮದಿನ ಮೇಲೆ ನಿಯಂತ್ರಣ ಹೇರಿದ್ದ ಕೇಂದ್ರ ಸರ್ಕಾರ ಇದೀಗ 2025ರಿಂದ ಗ್ಯಾಜೆಟ್‌ಗಳ ಆಮದಿಗೆ ಮುಕ್ತ ಅನುಮತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಹಾಗೂ ಹೂಡಿಕೆಗೆ ಪೂರಕವಾದ ನೀತಿಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ರಷ್ಯಾ ಪ್ರಧಾನಿ ವ್ಲಾದಿಮಿರ್ ಪುಟಿನ್, ‘ಭಾರತದಲ್ಲಿ ಉತ್ಪಾದನಾ ಕ್ಷೇತ್ರದಲ್ಲಿ ಇನ್ನಷ್ಟು ಹೂಡಿಕೆಗೆ ನಾವು ಸಿದ್ಧ’ ಎಂದು ಹೇಳಿದ್ದಾರೆ.
2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮೇಕ್ ಇನ್ ಇಂಡಿಯಾಗೆ 10 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.