ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ...?
Feb 13 2025, 12:48 AM ISTಮೈಸೂರು ವಿಶ್ವ ವಿದ್ಯಾಲಯದ ಅಧೀನದಲ್ಲಿದ್ದ ಮಂಡ್ಯ ಜಿಲ್ಲೆ ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವಾಗಿ ಏಳು ವರ್ಷಗಳ ಹಿಂದೆ ಹೊರಹೊಮ್ಮಿತ್ತು. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಸೌಲಭ್ಯಗಳು, ಬೋಧಕ-ಬೋಧಕೇತರ ಸಿಬ್ಬಂದಿ ನೇಮಕಕ್ಕೆ ಸರ್ಕಾರಗಳು ತೋರಿದ ನಿರ್ಲಕ್ಷ್ಯದಿಂದಾಗಿ ವಿಶ್ವ ವಿದ್ಯಾಲಯ ಪ್ರಗತಿಯತ್ತ ಮುನ್ನಡೆಯಲೇ ಇಲ್ಲ. ಇದೀಗ ರಾಜ್ಯ ಸರ್ಕಾರ ಮಂಡ್ಯ ವಿಶ್ವ ವಿದ್ಯಾಲಯವನ್ನು ಮತ್ತೆ ಮೈಸೂರು ವಿಶ್ವ ವಿದ್ಯಾಲಯದೊಂದಿಗೆ ವಿಲೀನಗೊಳಿಸುವ ತೀರ್ಮಾನಕ್ಕೆ ಮುಂದಾಗಿದೆ.