ಮೋದಿ ಆಶೀರ್ವಾದ ಸಿಕ್ಕಿದ್ದು ನನ್ನ ಗೆಲುವಿನ ದಿಕ್ಸೂಚಿ: ಗಾಯತ್ರಿ
Mar 19 2024, 12:48 AM ISTಮಹಿಳಾ ಸಬಲೀಕರಣದ ಬಗ್ಗೆ ನರೇಂದ್ರ ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳುವುದಿಲ್ಲ. ಅದನ್ನು ಕಾರ್ಯ ರೂಪಕ್ಕೆ ತಂದು ತೋರಿಸಿದ್ದಾರೆ. ಮಹಿಳಾ ಕೋಟಾದಲ್ಲಿ ನನಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಟಿಕೆಟ್ ಕೊಟ್ಟಿದ್ದಾರೆ. ಅಂತಹ ಮಹಾನ್ ನಾಯಕರ ಜೊತೆಗೆ ನಿಂತು, ರ್‍ಯಾಲಿಯಲ್ಲಿ ಭಾಗವಹಿಸಲು ತಮಗೆ ಅವಕಾಶ ಕಲ್ಪಿಸುವ ಮೂಲಕ ಲಕ್ಷಾಂತರ ಮಹಿಳೆಯರಿಗೆ ಮೋದಿ ಗೌರವ ಸೂಚಿಸಿದ್ದಾರೆ.